ಅಕ್ಟೋಬರ್ 29ರಂದು ಹ್ಯಾಟ್ರಿಕ್ ಹೀರೋ ಸಿನಿಮಾ ‘ಭಜರಂಗಿ-2’ ಬಿಡುಗಡೆ

Sunday, September 26, 2021

ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಸಿನಿಮಾ ಬಿಡುಗಡೆಗೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.

ಸರಕಾರ ಚಿತ್ರಮಂದಿರಗಳಲ್ಲಿ 100 % ಸೀಟು ಭರ್ತಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅಕ್ಟೋಬರ್29 ರಂದು ರಾಜ್ಯಾದ್ಯಂತ ಬೆಳ್ಳಿ ಪರದೆ ಮೇಲೆ ಭರ್ಜರಿ ಸಿನಿಮಾ ಬರಲಿದೆ. ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ.

ಸರಕಾರದ ಹೊಸ ಆದೇಶ ಬಂದ ಬಳಿಕ ಕನ್ನಡದ ಸ್ಟಾರ್ ನಟರುಗಳ ಸಿನಿಮಾಗಳ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದ್ದು, ರಿಲೀಸ್ ದಿನಾಂಕಗಳನ್ನು ಪ್ರಕಟಿಸಲಾಗುತ್ತಿದೆ.

‘ಭಜರಂಗಿ 2’ ಸಿನಿಮಾ ಸೆ.10ರಂದು ಬಿಡುಗಡೆಯಾಗಬೇಕಿತ್ತು. ಆದರೆಕೋವಿಡ್ ಭೀತಿ ಹಾಗೂ ಚಿತ್ರಮಂದಿರಗಳಲ್ಲಿ 100 % ಸೀಟು ಭರ್ತಿಗೆ ಅವಕಾಶ ಇಲ್ಲದಿದ್ದರಿಂದ ದಿನಾಂಕ ಮುಂದೂಡಲಾಗಿತ್ತು.

Share