ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಆಹ್ವಾನಿಸಿದ ಸಚಿವ ಎಸ್.ಟಿ. ಸೋಮಶೇಖರ್

Saturday, October 2, 2021

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಆರ್.ಟಿ.ನಗರದ ನಿವಾಸದಲ್ಲಿ ಭೇಟಿ ಮಾಡಿದ ಸಹಕಾರ ಹಾಗು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ೨೦೨೧ನೇ ಸಾಲಿನ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಮುಖ್ಯಮಂತ್ರಿಗಳನ್ನು ಗೌರವಿಸಿದ ಸಚಿವರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಚಿವರ ಆಹ್ವಾನವನ್ನು ಮುಖ್ಯಮಂತ್ರಿಗಳು ಸಂತೋಷದಿAದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಕೂಡ ಸನ್ಮಾನಿಸಿ ಆಹ್ವಾನಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಎಸ್, ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಹಿರಿಯ ಮುತ್ಸುದ್ಧಿ ಎಸ್.ಎಂ.ಕೃಷ್ಣ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಅಶೋಕ್ ಅವರನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.

ಕೋವಿಡ್ ನಿಯಮಗಳನ್ನು ಮೀರದಂತೆ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಅ. ೭ರಂದು ಮೈಸೂರಿನಲ್ಲಿ ದಸರಾ ಉದ್ಘಾಟನೆ ಬಳಿಕ ಚಾಮರಾಜನಗರಕ್ಕೂ ಭೇಟಿ ನೀಡಲಿದ್ದಾರೆ ಎಂದರು.


Share