ವೈಯಕ್ತಿಕ ಟೀಕೆ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡಲಿ- ಜೆಡಿಎಸ್ ಶಾಸಕರಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್

Monday, September 13, 2021

ವೈಯಕ್ತಿಕ ಟೀಕೆ ಮಾಡುವುದನ್ನ ಬಿಟ್ಟು ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಲಿ ಎಂದು ಜೆಡಿಎಸ್ ಶಾಸಕರಿಗೆ  ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಏನು ಬೇಕಾದರೂ ಮಾತನಾಡಲಿ. ಮಂಡ್ಯದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಿದರೆ ಅದನ್ನು ಸ್ವಾಗತಿಸುತ್ತೇನೆ. ಮಂಡ್ಯದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ಕೊರೊನಾ ಸಂಕಷ್ಟ, ಜನರ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡಲಿ. ಅದನ್ನು ಬಿಟ್ಟು ವೈಯಕ್ತಿವಾಗಿ ನನ್ನ ವಿಚಾರಗಳನ್ನು ಚರ್ಚೆ ಮಾಡುವುದು  ಏಕೆ ಎಂದು ಪ್ರಶ್ನಿಸಿದರು.

ಅಕ್ರಮವಾಗಿ ನಡೆಸುತ್ತಿದ್ದ ಗಣಿ ಮಾಲೀಕರು ಸಕ್ರಮ ಗಣಿ ಮಾಲೀಕರಿಗೆ ಬೆದರಿಕೆ ಹಾಕಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಸಕ್ರಮ ಗಣಿಗಾರಿಕೆಯನ್ನು ಯಾರಿಂದಲೂ ಸಹ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು.


Share