ವಿಧಾನಸೌಧದ ಮುತ್ತಿಗೆ ಹಾಕಲು ಮುಂದಾದ ರೈತರಿಗೆ ಪೊಲೀಸರಿಂದ ತಡೆ

Monday, September 13, 2021

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾನಿರತ ರೈತರನ್ನ ಪೊಲೀಸರು ತಡೆದರು.

ಬೆಂಗಳೂರು ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಪ್ರತಿಭಟನಾ ರ್ಯಾಲಿ ಮೂಲಕ ತೆರಳುತ್ತಿದ್ದ ರೈತರನ್ನ ಫ್ರೀಡಂಪಾರ್ಕ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ರೈತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು.

Share